ನವದೆಹಲಿ : ಕೇಂದ್ರ ಸಚಿವ ಸಂಪುಟವು ಆಂಧ್ರಪ್ರದೇಶದ ವಿಜಯವಾಡ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಲು ಒಪ್ಪಿಗೆ ಸೂಚಿಸಿದೆ.
ಆಂಧ್ರಪ್ರದೇಶ ಪುನರ್ವ್ಯವಸ್ಥೆ ಆ್ಯಕ್ಟ್ 2014 ರ ನಿಬಂಧನೆಗಳ ಪ್ರಕಾರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಮಾಧ್ಯಮ ಹೇಳಿಕೆಯಲ್ಲಿ ಹೇಳಿದ್ದಾರೆ.
ಕಾಯ್ದೆ ಪ್ರಕಾರ ತೆಲಂಗಾಣ ಮತ್ತು ಆಂಧ್ರಪ್ರದೇಶಗಳಾಗಿ ವಿಂಗಡಿಸಿದ ಪರಿಣಾಮ ಹೈದರಾಬಾದ್ ನಗರದಲ್ಲಿ ಏಕೈಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ತೆಲಂಗಾಣಕ್ಕೆ ಸೇರಿತು. ಪ್ರಯಾಣಿಕರ ಸಂಚಾರದ ಏರಿಕೆ ಮತ್ತು ಏರ್ಲೈನ್ಸ್ ಹಾಗೂ ಆಂಧ್ರ ಪ್ರದೇಶ ಸರ್ಕಾರದ ಬೇಡಿಕೆಯಿಂದಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅಧಿಕೃತ ವರದಿ ಹೇಳಿದೆ.
ವಿಜಯವಾಡದ ಬಳಿ ಇರುವ ಗನ್ನಾವರಂ ವಿಮಾನನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ ನೀಡುವುದರಿಂದ ಆಂಧ್ರಪ್ರದೇಶಕ್ಕೆ ಸಂರ್ಪಕವನ್ನು ಹೆಚ್ಚಿಸಲು ಸಹಾಯವಾಗುತ್ತದೆ ಮತ್ತು ಹೆಚ್ಚಿನ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ ಸರ್ಕಾರ ಭರವಸೆ ವ್ಯಕ್ತಪಡಿಸಿದೆ.
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಂತಾರಾಷ್ಟ್ರೀಯ ಕಾರ್ಯಾಚರಣೆಗಳ ಸೌಲಭ್ಯಗಳು ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಏರಿಕೆಗೆ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ವರ್ಷಾರಂಭದಲ್ಲಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಮಾನ ನಿಲ್ದಾಣದಲ್ಲಿ ಹೊಸ ಸಾಗಣೆ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ್ದರು.
ವಿಜಯವಾಡ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ ನೀಡುತ್ತಿರುವ ನಿರ್ಧಾರವನ್ನು ಸ್ವಾಗತಿಸಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು, ಈ ನಿರ್ಧಾರದಿಂದ ಸುಮಾರು 1,150 ಜನರಿಗೆ ಉದ್ಯೋಗಾವಕಾಶ ಲಭಿಸಲು ಸಹಾಯಕವಾಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.