ನವದೆಹಲಿ: 2012ರ ಡಿಸೆಂಬರ್ 16ರಂದು ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್ನಲ್ಲಿ ನಡೆದ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಸುಪ್ರೀಂಕೋರ್ಟ್ ಶುಕ್ರವಾರ ಮರಣದಂಡನೆ ಘೋಷಿಸಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ. ಆರ್.ಭಾನುಮತಿ. ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠ ಹೈಕೋರ್ಟ್ ನೀಡಿದ್ದ ಮರಣದಂಡನೆ ಶಿಕ್ಷೆಯನ್ನು ಎತ್ತಿಹಿಡಿದಿದೆ.
ಇದೊಂದು ಅನಾಗರಿಕ ಕೃತ್ಯವೆಂದು ವಿಶ್ಲೇಷಿರುವ ನ್ಯಾಯಪೀಠ, ಕೃತ್ಯದಿಂದಾದ ಹಾನಿ, ಕೃತ್ಯದ ಗಂಭೀರತೆಯನ್ನು ಪರಿಗಣಿಸಿ ಮರಣದಂಡನೆ ವಿಧಿಸುವುದಾಗಿ ತಿಳಿಸಿದೆ.
ಈ ಪ್ರಕರಣದ ಐದನೇ ಆರೋಪಿ ಜೈಲಿನಲ್ಲಿಯೇ ಮೃತನಾಗಿದ್ದಾನೆ, ಇನ್ನೋರ್ವ ಅಪ್ರಾಪ್ತ ಎಂಬ ಕಾರಣದಿಂದಾಗಿ ಶಿಕ್ಷೆಯಿಂದ ತಪ್ಪಿಸಿಕೊಂಡಿದ್ದಾನೆ.
ಸುಪ್ರೀಂನ ಈ ತೀರ್ಪಿಗೆ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದ್ದು, ತೀರ್ಪು ನಮಗೆ ತೃಪ್ತಿ ತಂದಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.