ಬೀಜಿಂಗ್: ಚೀನಾ ಮತ್ತು ಭಾರತ ಶುಕ್ರವಾರ ಮಹತ್ವದ 24 ಒಪ್ಪಂದಗಳಿಗೆ ಸಹಿ ಹಾಕಿವೆ. ಇದರ ಮೌಲ್ಯ 10 ಬಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ.
ಚೀನಾ ಪ್ರಧಾನಿ ಕ್ಸಿ ಜಿನ್ಪಿಂಗ್ ಅವರೊಂದಿಗೆ ಮೋದಿ ಮಹತ್ವದ ಮಾತುಕತೆ ನಡೆಸಿದ ಬಳಿಕ ಇಬ್ಬರು ಮುಖಂಡರು ಈ ಒಪ್ಪಂದಗಳಿಗೆ ಸಹಿ ಹಾಕಿದರು.
ಶಿಕ್ಷಣ, ರೈಲ್ವೇ, ಸಹಕಾರ ಮತ್ತು ಸಮುದ್ರ ವಿಜ್ಞಾನ, ಕೌಶಲ್ಯಾಭಿವೃದ್ಧಿ ಮುಂತಾದ ಮಹತ್ವದ ವಿಷಯಗಳನ್ನು ಒಡಂಬಡಿಕೆ ಒಳಗೊಂಡಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ ‘ನಾವು ಈ ಸಂಬಂಧವನ್ನು ಉತ್ತಮಗೊಳಿಸುವ ಐತಿಹಾಸಿಕ ಜವಾಬ್ದಾರಿಯನ್ನು ಹೊಂದಿದ್ದೇವೆ. ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಪಾರದರ್ಶಕತೆಯನ್ನು ಸ್ಥಾಪಿಸಲು ನಾವು ಕಟಿಬದ್ಧರಾಗಿದ್ದೇವೆ. ಪರಸ್ಪರರ ಹಿತಾಸಕ್ತಿಯ ಬಗ್ಗೆ ಸೂಕ್ಷ್ಮಗ್ರಹಿಗಳಾಗಿದ್ದೇವೆ’ ಎಂದರು.
ಉಭಯ ದೇಶಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿರುವುದರಿಂದ ಮೋದಿ ಚೀನಾ ಪ್ರವಾಸ ಯಶಸ್ವಿಯಾಗಿದೆ ಎಂದೇ ವಿಶ್ಲೇಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.