ನವದೆಹಲಿ: ಗೋವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನವನ್ನು ನೀಡಬೇಕು ಎಂದು ಜಾಮಿಯತ್ ಉಲೇಮ-ಇ-ಹಿಂದ್ ಅಧ್ಯಕ್ಷ ಮೌಲಾನ ಸೈಯದ್ ಅರ್ಶದ್ ಮದನಿ ಮನವಿ ಮಾಡಿಕೊಂಡಿದ್ದಾರೆ.
ಗೋವುಗಳ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭೀತಿ ವ್ಯಕ್ತಪಡಿಸಿದ ಅವರು, ಸರ್ಕಾರ ಗೋವುಗಳಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನವನ್ನು ನೀಡಬೇಕು, ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ.
ನಕಲಿ ಗೋ ರಕ್ಷಕರು ಲೂಟಿ ಮಾಡಲು, ಕೊಲೆ ಮಾಡಲು, ಕಾನೂನನ್ನು ಕೈಗೆತ್ತಿಕೊಳ್ಳಲು ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ. ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳನ್ನು ನಾವು ಗೌರವಿಸುತ್ತೇವೆ. ಆದರೆ ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.