ಜೈಪುರ: ರಾಜಸ್ಥಾನದ ಭರತ್ಪುರ್ನಲ್ಲಿ ಮದುವೆ ಹಾಲ್ನ ಗೋಡೆ ಕುಸಿದು ಬಿದ್ದ ಪರಿಣಾಮ ನಾಲ್ಕು ಮಕ್ಕಳೂ ಸೇರಿದಂತೆ 24 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವಿಟ್ ಮಾಡಿರುವ ಅವರು, ಈ ಘಟನೆಯಿಂದ ಉಂಟಾದ ನೋವನ್ನು ಅಕ್ಷರಗಳಲ್ಲಿ ಹೇಳಲು ಸಾಧ್ಯವಿಲ್ಲ. ಮೃತರ ಕುಟುಂಬಸ್ಥರೊಂದಿಗೆ ನಮ್ಮ ಸಾಂತ್ವನಗಳಿರಲಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ ಎಂದಿದ್ದಾರೆ.
ಅಲ್ಲದೇ ಮೃತರ ಕುಟುಂಬಿಕರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ ಮತ್ತು ಗಾಯಾಳುಗಳಿಗೆ 50 ಸಾವಿರ ನೀಡಿದ್ದಾರೆ.
ಸಿಡಿಲಿನ ಪರಿಣಾಮವಾಗಿ ಗೋಡೆ ಕುಸಿದಿದೆ ಎನ್ನಲಾಗಿದ್ದು, ಹಾಲ್ ಮಾಲೀಕನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.