ಮಂಗಳೂರು : 2016-17 ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ಉಡುಪಿ, ದ್ವಿತೀಯ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ತೃತೀಯ ಸ್ಥಾನ ಪಡೆದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ ಕಠಿಣ ಪರಿಶ್ರಮದ ಮೂಲಕ ಖ್ಯಾತಿ ತಂದ ವಿದ್ಯಾರ್ಥಿಗಳನ್ನು ಹಾಗೂ ಅವರ ಪೋಷಕರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ರವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.
ರಾಜ್ಯಕ್ಕೇ ಮಾದರಿಯಾಗಬಲ್ಲ ಶೈಕ್ಷಣಿಕ ಪರಂಪರೆಯನ್ನು ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು, ಪಠ್ಯಕ್ರಮದ ಚೌಕಟ್ಟಿನಲ್ಲಿ ಯಾವುದೇ ಗೊಂದಲಕ್ಕೂ ಅಸ್ಪದ ಕೊಡದೆ ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಂಡು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ನೀಡಿದ ಕೊಡುಗೆಯನ್ನು ಅತ್ಯಂತ ಕೃತಜ್ಞತೆಗಳಿಂದ ಸ್ಮರಿಸುತ್ತಾ, ಮುಂದಿನ ದಿನಗಳಲ್ಲೂ ಈ ಸಾಧನೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ವಿನಂತಿಸಿದ್ದಾರೆ. ಅದ್ಬುತ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಭಗವಂತ ಯಶಸ್ಸನ್ನು ಹಾಗೂ ಉಜ್ವಲ ಭವಿಷ್ಯವನ್ನು ದಯಪಾಲಿಸಲಿ ಎಂದು ಅವರು ಪತ್ರಿಕಾ ಪ್ರಕಟಣೆಯ ಮೂಲಕ ಹಾರೈಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.