ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ್ ಎಂ. ನಾಯರಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 623 ಅಂಕಗಳಿಸುವ ಮೂಲಕ ರಾಜ್ಯಕ್ಕೆ 3ನೇ ರ್ಯಾಂಕ್ ಅನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರು ಯಲಹಂಕ ನ್ಯೂಟೌನ್ನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ಮಂಜುನಾಥ ಎನ್. ನಾಯರಿ ಹಾಗೂ ಗೀತಾ ಎಂ. ದಂಪತಿಯ ಪುತ್ರ ಆಕಾಶ್ ಎಂ. ನಾಯರಿ ಸಾಧನೆ ಮಾಡಿದ ವಿದ್ಯಾರ್ಥಿ. ಈತ ಗಣಿತ, ಇಂಗ್ಲಿಷ್, ವಿಜ್ಞಾನ ಹಾಗೂ ಸಮಾಜದಲ್ಲಿ ನೂರಕ್ಕೆ 100, ಕನ್ನಡದಲ್ಲಿ ನೂರಕ್ಕೆ 99, ಹಾಗೂ ಪ್ರಥಮ ಭಾಷೆ ಸಂಸ್ಕೃತದಲ್ಲಿ 125 ಕ್ಕೆ 124 ಅಂಕಗಳನ್ನು ಆಕಾಶ್ ಎಂ. ನಾಯರಿ ಪಡೆದಿದ್ದಾರೆ.
ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರ ನಿರಂತರ ನಿಗಾ ಆಳ್ವಾಸ್ನಲ್ಲಿ ದೊರಕಿದ್ದರಿಂದ ಗರಿಷ್ಠ ಅಂಕ ಸಾಧನೆ ಸಾಧ್ಯವಾಯಿತು. ವಿದ್ಯಾರ್ಥಿಗಳು ಶಿಕ್ಷಕರ ಮಾತನ್ನು ಚಾಚೂತಪ್ಪದೇ ಪಾಲಿಸಿದಲ್ಲಿ ಯಶಸ್ಸು ಪಡೆಯಬಹುದು. ಶಿಕ್ಷಕರ ಮಾತು ನಮ್ಮ ಒಳ್ಳೆಯದಕ್ಕೆಂದು ಭಾವಿಸಿದರೆ ಅದರ ಫಲ ನಮಗೆ ದೊರಕುತ್ತದೆ ಎಂದು ಆಕಾಶ್ ಎಂ. ನಾಯರಿ ಪತ್ರಿಕೆ ಜೊತೆ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.