ಮಂಗಳೂರು : ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೊದಲ ಮೂರು ವರ್ಷಗಳಲ್ಲಿ ಬರ ಪರಿಹಾರಕ್ಕೆಂದು 4633 ಕೋಟಿ ರೂಪಾಯಿಗಳನ್ನು ರಾಜ್ಯ ಸರಕಾರಕ್ಕೆ ಬಿಡುಗಡೆ ಮಾಡಿತ್ತು. ಈ ಸತ್ಯವನ್ನು ಮರೆ ಮಾಚುವ ಮೂಲಕ ರಾಜ್ಯ ಸರಕಾರ ಕೇಂದ್ರ ಸರಕಾರ ಏನೂ ಕೊಟ್ಟಿಲ್ಲ ಎಂದು ಸುಳ್ಳು ಹೇಳುವುದು ಯಾವ ಉದ್ದೇಶಕ್ಕೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಪ್ರಶ್ನಿಸಿದ್ದಾರೆ.
ಬರ ಪರಿಹಾರಕ್ಕೆಂದು ಕೊಟ್ಟ ಹಣವನ್ನು ದುರುಪಯೋಗ ಪಡಿಸಿದ್ದಲ್ಲದೇ ರೈತರಿಗೆ ಪರಿಹಾರ ಕಲ್ಪಿಸುವಲ್ಲಿ ಸಂಪೂರ್ಣ ವಿಫಲಗೊಂಡಿರುವ ರಾಜ್ಯ ಸರಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವುದರಿಂದ ಜನರನ್ನು ದಾರಿ ತಪ್ಪಿಸುತ್ತಿರುವುದು ಖಂಡನೀಯ ಎಂದು ವೇದವ್ಯಾಸ ಕಾಮತ್ ಹೇಳಿದ್ದಾರೆ. ಅತ್ತ ರೈತರ ಸಾಲ ಮನ್ನಾ ಕೂಡ ಮಾಡದೇ, ಕೇಂದ್ರದ ಹಣವನ್ನು ಸರಿಯಾಗಿ ಉಪಯೋಗಿಸುವುದಕ್ಕೂ ಆಗದೇ ಸಿದ್ಧರಾಮಯ್ಯ ನೇತೃತ್ವದ ಸರಕಾರ ರೈತರನ್ನು ವಂಚಿಸಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.