ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸುವ ವೇಳೆ ಸನ್ ಗ್ಲಾಸ್ ಧರಿಸಿದ್ದ ಬಸ್ತರ್ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಛತ್ತೀಸ್ಗಢ ಸರ್ಕಾರ ನೋಟಿಸ್ ಜಾರಿಗೊಳಿಸಿದೆ.
ಜಗದಲ್ಪುರ್ ವಿಮಾನನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಸ್ವಾಗತಿಸುವ ವೇಳೆ ಐಎಎಸ್ ಅಧಿಕಾರಿ ಅಮಿತ್ ಕಟಾರಿಯಾ ಅವರು ಸನ್ ಗ್ಲಾಸ್ ಧರಿಸಿದ್ದರು. ಈ ಮೂಲಕ ಶಿಷ್ಟಾಚಾರದ ಉಲ್ಲಂಘನೆ ಮಾಡಿದ್ದರು.
ಕಟಾರಿಯಾ ಅವರು ತಮ್ಮ ಕರ್ತವ್ಯದಲ್ಲಿ ‘ಶ್ರದ್ಧೆ ಮತ್ತು ಸಮಗ್ರತೆ’ಯನ್ನು ತೋರಿಸದೆ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಛತ್ತೀಸ್ಗಢ ಸರ್ಕಾರ ಅವರಿಗೆ ನೋಟಿಸ್ ಜಾರಿಗೊಳಿಸಿದೆ, ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದೆ.
ಮೇ.9ರಂದು ನಕ್ಸಲ್ ಪೀಡಿತ ಬಸ್ತರ್ ಜಿಲ್ಲೆಗೆ ತೆರಳಿದ್ದ ಮೋದಿ ಅಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.