ಪಾಟ್ನಾ: 2019ರ ಸಾರ್ವತ್ರಿಕ ಚುನಾವಣೆಗೆ ತಾನು ಪ್ರಧಾನಿ ಅಭ್ಯರ್ಥಿ ಅಲ್ಲ ಎಂಬುದನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಕೆಲವು ದಿನಗಳಿಂದ ಅವರ ಹೆಸರು ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಕೇಳಿ ಬರುತ್ತಿತ್ತು. ಇದೀಗ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿ ವದಂತಿಗೆ ತೆರೆ ಎಳೆದಿದ್ದಾರೆ.
ಪ್ರಧಾನಿಯಾಗುವ ಆಶಯ ಅಥವಾ ಸಾಮರ್ಥ್ಯ ನನಗಿಲ್ಲ ಎಂದಿರುವ ಅವರು, ಯಾರಲ್ಲಿ ಜನರು ಸಾಮರ್ಥ್ಯವನ್ನು ನೋಡುತ್ತಾರೋ ಅವರು ಪ್ರಧಾನಿಯಾಗುತ್ತಾರೆ. ಕಳೆದ ಚುನಾವಣೆಯಲ್ಲಿ ಜನ ಮೋದಿಯಲ್ಲಿ ಸಾಮರ್ಥ್ಯವನ್ನು ಕಂಡರು, ಅವರು ಪ್ರಧಾನಿಯಾದರು ಎಂದಿದ್ದಾರೆ.
ಕೆಲವೊಂದು ಪಕ್ಷಗಳು ಸೇರಿ 2019ಕ್ಕೆ ಬಿಜೆಪಿ ವಿರುದ್ಧ ಮಹಾಮೈತ್ರಿಯನ್ನು ರಚಿಸುವ ತಯಾರಿ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ನಿತೀಶ್ ಅವರ ಹೆಸರನ್ನು ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ತೇಲಿ ಬಿಡಲಾಗುತ್ತಿದೆ.
ಆದರೀಗ ಸ್ವತಃ ನಿತೀಶ್ ಅವರೇ ಇದಕ್ಕೆ ಸ್ಪಷ್ಟನೆ ನೀಡಿದ್ದು, ನಾನೇನು ಹೆಡ್ಡನಲ್ಲ, ಪ್ರಾದೇಶಿಕ ಪಕ್ಷ ರಾಷ್ಟ್ರೀಯ ಅಧ್ಯಕ್ಷನಾದ ಮಾತ್ರಕ್ಕೆ ರಾಷ್ಟ್ರೀಯ ಸ್ಥಾನದ ಆಶಯ ಇಟ್ಟುಕೊಳ್ಳಲು ಸಾಧ್ಯವಿಲ್ಲ. ನನಗೆ ಆಶಯವೂ ಇಲ್ಲ, ಸಾಮರ್ಥ್ಯವೂ ಇಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.