ಜಮ್ಮು: ಜಮ್ಮು ಕಾಶ್ಮೀರದ ಸೋಫಿಯಾನ ಜಿಲ್ಲೆಯಲ್ಲಿ ಸೇನೆ ಮತ್ತು ವಿಶೇಷ ಕಾರ್ಯಾಚರಣೆ ಪಡೆಗಳು ಬೃಹತ್ ಕಾರ್ಯಾಚರಣೆಯನ್ನು ನಡೆಸಿವೆ. ಇಲ್ಲಿನ ಗ್ರಾಮಗಳಲ್ಲಿ ಶಸ್ತ್ರಸಜ್ಜಿತ ಉಗ್ರರು ಅವಿತುಕೊಂಡಿದ್ದಾರೆ ಎಂಬ ಮಾಹಿತಿಯ ಮೇರೆಗೆ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ.
ಒಟ್ಟು 1,000 ಸೇನಾ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಸೋಫಿಯಾನದ ಹೆಫ್ ಮತ್ತು ಶರ್ಮಲ್ ಗ್ರಾಮಗಳ 500ಕ್ಕೂ ಅಧಿಕ ಮನೆಗಳನ್ನು ಇವರು ತಡಕಾಡಿದ್ದಾರೆ.
15 ದಿನಗಳಲ್ಲಿ ಸೋಫಿಯಾನದಲ್ಲಿ ನಡೆಯುತ್ತಿರುವ ಎರಡನೇ ಬೃಹತ್ ಕಾರ್ಯಾಚರಣೆ ಇದಾಗಿದ್ದು, ಸೇನಾಧಿಕಾರಿ ಉಮರ್ ಫಯಾಝ್ ಅವರ ಹತ್ಯೆ ಬಳಿಕದ ಮೊದಲನೇ ಕಾರ್ಯಾಚರಣೆಯಾಗಿದೆ.
ಪಾಕ್ ಪರವಾದ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ನ 10 ಶಸ್ತ್ರಸಜ್ಜಿತ ಉಗ್ರರು ಇಲ್ಲಿ ಅವಿತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಹಿನ್ನಲೆಯಲ್ಲಿ ಈ ಬೃಹತ್ ಶೋಧ ಕಾರ್ಯಾಚರಣೆ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.