ಪಾಟ್ನಾ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಬಿಹಾರಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮೂರು ವರ್ಷಗಳಲ್ಲಿ ಮಾಡಿದ ಸಾಧನೆಗಳನ್ನು ಬಿಂಬಿಸಲಿದ್ದಾರೆ.
2017 ರ ಮೇ 26 ರಂದು ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಆಡಳಿತಕ್ಕೆ ಬಂದು ೩ ವರ್ಷಗಳನ್ನು ಪೂರೈಸಲಿದೆ. ಈ ಹಿನ್ನಲೆಯಲ್ಲಿ ದೇಶದಾದ್ಯಂತ ಬೃಹತ್ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ಬಿಜೆಪಿಯ ಪ್ರಮುಖ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳು ದೇಶದ ವಿವಿಧ ಭಾಗಗಳಿಗೆ ತೆರಳಿ ಕೇಂದ್ರ ಕಳೆದ ೩ ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಪ್ರಚಾರ ಪಡಿಸಲಿದ್ದಾರೆ.
ಪಕ್ಷದ ಬೃಹತ್ ಅಭಿಯಾನದ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಸೇರಿದಂತೆ ಹಲವಾರು ಸಂಸದರುಗಳು ಬಿಹಾರಕ್ಕೆ ಮೇ ೨೫ ರಿಂದ ಜೂನ್ ೧೫ರೊಳಗೆ ಭೇಟಿ ಕೊಟ್ಟು ಮೋದಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.