ಮಂಗಳೂರು : ಅಖಿಲ ಭಾರತ ಮಟ್ಟದ ಸಾಮಾನ್ಯ ಕಾನೂನು ಪರೀಕ್ಷಾ ವಿಭಾಗದಲ್ಲಿ ಶಾರದಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್ರಾಜ್ ಸುರೇಶ್ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಕೇಂದ್ರೀಯ ಪರೀಕ್ಷಾ ವಿಭಾಗದಲ್ಲಿ 10ನೇ ರ್ಯಾಂಕ್ ಗಳಿಸಿರುತ್ತಾರೆ. ಈ ವಿದ್ಯಾರ್ಥಿಯ ಸಾಧನೆಗೆ ಶಾರದಾ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಎಂ. ಬಿ. ಪುರಾಣಿಕ್ ಹಾಗೂ ಕಾಲೇಜಿನ ಪ್ರಾಚಾರ್ಯರಾದ ಡಾ| ಡಿ. ಶ್ರೀಪತಿ ರಾವ್ ಮತ್ತು ಆಡಳಿತ ಮಂಡಳಿಯ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ. ಈ ವಿದ್ಯಾರ್ಥಿ ಮಂಗಳೂರಿನ ಶ್ರೀ ಎಂ. ಕೆ. ಸುರೇಶ್ ಹಾಗೂ ರಜನಿ ಸುರೇಶ್ ದಂಪತಿಗಳ ಸುಪುತ್ರ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.