ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತೆ ಭಾರೀ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತೀ ಲೀಟರ್’ಗೆ 3.13 ರೂಪಾಯಿ ಏರಿಕೆಯಾಗಿದೆ. ಡೀಸೆಲ್ ಬೆಲೆಯಲ್ಲಿ 2.71 ರೂಪಾಯಿ ಹೆಚ್ಚಳವಾಗಿದೆ.
ಈ ನೂತ ಪರಿಷ್ಕೃತ ದರಗಳು ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿವೆ.
ಈ ವರ್ಷದ ಫೆಬ್ರವರಿ ತಿಂಗಳಿನಿಂದ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತವಾಗಿ ಏರಿಕೆ ಕಾಣುತ್ತಿವೆ. ಮೂರು ತಿಂಗಳಲ್ಲಿ ಸುಮಾರು 10 ರೂಪಾಯಿಯಷ್ಟು ಪೆಟ್ರೋಲ್ ದರ ಏರಿಕೆಯಾಗಿದೆ. ಡೀಸೆಲ್ ಬೆಲೆಯಲ್ಲಿ ಸುಮಾರು 6 ರೂಪಾಯಿ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ತೈಲ ಬೆಲೆಗಳಲ್ಲಿ ಏರಿಳಿತಗಳು ಆಗುತ್ತಿರುವ ಪರಿಣಾಮ ಭಾರತದಲ್ಲೂ ಬೆಲೆ ಏರಿಕೆಯಾಗುತ್ತಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.