ಚಂಡೀಗಢ: ಸರ್ಕಾರದ ಜಾಗಗಳನ್ನು ಅತಿಕ್ರಮಿಸಿಕೊಂಡ ಬಗ್ಗೆ ಮತ್ತು ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಿದ ಬಗ್ಗೆ ಹರಿಯಾಣ ಸರ್ಕಾರ ಡ್ರೋನ್ ಗಳನ್ನು ಬಳಸಿ ವೈಮಾನಿಕ ಸಮೀಕ್ಷೆ ನಡೆಸಲು ನಿರ್ಧರಿಸಿದೆ.
ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ನೇತೃತ್ವದಲ್ಲಿ ನಡೆದ ನಗರ ಸ್ಥಳಿಯಾಡಳಿತ ಇಲಾಖೆಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಮೊದಲು ಪ್ರಾಯೋಗಿಕವಾಗಿ ವೈಮಾನಿಕ ಸಮೀಕ್ಷೆ ನಡೆಸಲಾಗುವುದು, ಇದು ಯಶಸ್ವಿಯಾದರೆ ಮುಂದೆ ಎಲ್ಲಾ ಕಡೆಯೂ ಇದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಖಟ್ಟರ್ ತಿಳಿಸಿದ್ದಾರೆ.
ಡ್ರೋನ್ ಬಳಸಿ ವೈಮಾನಿಕ ಸಮೀಕ್ಷೆ ನಡೆಸುವ ನೀಲಿ ನಕ್ಷೆ ಸಿದ್ಧಪಡಿಸುವಂತೆ ಅವರು ನಗರ ಸ್ಥಳಿಯಾಡಳಿತಗಳಿಗೆ ಒಂದು ವಾರಗಳ ಸಮಯಾವಕಾಶ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.