ನವದೆಹಲಿ: ಕಾಶ್ಮೀರದಲ್ಲಿನ ಭದ್ರತಾ ವ್ಯವಸ್ಥೆ ಸುಧಾರಣೆಗೊಂಡಿದ್ದು, ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಳಿಕ ಶೇ.45ರಷ್ಟು ಒಳನುಸುಳುವಿಕೆ ಪ್ರಯತ್ನಗಳು ನಿಂತು ಹೋಗಿವೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಮೂರು ವರ್ಷಗಳ ಸಾಧನೆಯ ಬಗ್ಗೆ ಮಾಧ್ಯಮಗಳಿಗೆ ವಿವರಣೆ ನೀಡಿದ ಅವರು, ’ಕಳೆದ ಆರು ತಿಂಗಳುಗಳಿಂದ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಳಿಕ ಪಾಕಿಸ್ಥಾನದ ಒಳನುಸುಳುವಿಕೆಯ ಪ್ರಯತ್ನ ಶೇ.45ರಷ್ಟು ಕಡಿಮೆಯಾಗಿದೆ’ ಎಂದಿದ್ದಾರೆ.
ಕಳೆದ ವರ್ಷದ ಸೆಪ್ಟಂಬರ್ನಲ್ಲಿ ಕಾಶ್ಮೀರದ ವಾಸ್ತವ ಗಡಿರೇಖೆಯ ಸಮೀಪ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಸೇನೆ, 12 ಉಗ್ರರನ್ನು ಹತ್ಯೆ ಮಾಡಿತ್ತು, ಮಾತ್ರವಲ್ಲ ಉಗ್ರರ ಆಶ್ರಯ ತಾಣಗಳನ್ನು ಧ್ವಂಸಗೊಳಿಸಿತ್ತು.
’ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ವ್ಯವಸ್ಥೆ ಸುಧಾರಿಸಿದೆ. 2014-17ರವರೆಗೆ 368 ಉಗ್ರರನ್ನು ಹೊಡೆದುರುಳಿಸಲಾಗಿದೆ’ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.