ಮಂಗಳೂರು : ನಮ್ಮ ರಾಷ್ಟ್ರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯ ಸಾರ್ಥಕ ಮೂರು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ ಕೇಂದ್ರ ಸರಕಾರ ಹಮ್ಮಿಕೊಂಡಿರುವ ಜನೋಪಯೋಗಿ ಯೋಜನೆಗಳ ಕುರಿತು ಮಾಹಿತಿ ಮತ್ತು ಕೇಂದ್ರದ ಕಾನೂನು ಮತ್ತು ನ್ಯಾಯ, ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನದ ವಿಷಯದಲ್ಲಿ ಸಂವಾದ ನಡೆಸಲು ಕೇಂದ್ರದ ರಾಜ್ಯ ಖಾತೆ ಸಚಿವರಾಗಿರುವ ಪಿ. ಪಿ. ಚೌಧರಿಯವರು ಮಂಗಳೂರಿಗೆ ಆಗಮಿಸಲಿದ್ದಾರೆ.
ಜೂನ್ 7 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯುವ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಸಾಧನ ಸಮಾವೇಶದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಕೀಲರು, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಯುವಕ, ಯುವತಿಯರು, ಸಾಮಾಜಿಕ ಹೋರಾಟಗಾರರು, ನಾಗರಿಕರು ಮತ್ತು ಬಿಜೆಪಿಯ ಕಾರ್ಯಕರ್ತರು ಭಾಗವಹಿಸಿ ಮಾಹಿತಿ ಮತ್ತು ಸಂವಾದದ ಪ್ರಯೋಜನವನ್ನು ಪಡೆಯಬೇಕು ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ. ವೇದವ್ಯಾಸ ಕಾಮತ್ ವಿನಂತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.