ಮೂಡುಬಿದಿರೆ: ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಸಮಾಜದ ಒಳಿತಿಗೆ ಉಪಯೋಗಿಸುವುದು ಅವಶ್ಯ ಎಂದು ಚಿಕ್ಕಮಂಗಳೂರಿನ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿ.ಕೆ ಸುಬ್ಬರಾಯ ತಿಳಿಸಿದರು.
ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 128ನೇ ಐಎಸ್ಟಿಇ ಚಾಪ್ಟರ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಡಾ. ಗೀತಾ ಪ್ರಕಾಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, `ಶಿಕ್ಷಣ ಸಂಸ್ಥೆಗಳೊಂದಿಗೆ ಪರಸ್ಪರ ಶಿಕ್ಷಣದಲ್ಲಿ ಸಹಭಾಗಿತ್ವ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.
ಆಳ್ವಾಸ್ ಇಂಜಿನಿಯರಿಂಗ್ ಪ್ರಾಂಶುಪಾಲ ಡಾ.ಪೀಟರ್ ಫರ್ನಾಂಡೀಸ್ ತಂತ್ರಜ್ಞಾನವನ್ನು ಸುಧಾರಿಸಲು ಮತ್ತು ನವೀಕರಿಸಲು ಕಾಲೇಜಿನ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಕರೆ ನೀಡಿದರು.
ಐಎಸ್ಟಿಇ ಚಾಪ್ಟರ್ ಸಂಯೋಜಕ ಪ್ರೊ. ಜಿ ಬಿ ವಗ್ಗಾರ್, ಪ್ರಾಧ್ಯಾಪಕ ವಾಸುದೇವ್ ಶಹಾಪುರ್, ಡಾ.ಪ್ರವೀಣ್ ಜೆ, ಡಾ.ದತ್ತಾತ್ರೇಯ, ಶಂಕರಪ್ಪ ಕಲ್ಗುಡಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.