ನವದೆಹಲಿ: ದೇಶದಲ್ಲಿನ 100 ಅತೀ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಒಗ್ಗಟ್ಟಿನ ಪ್ರಯತ್ನ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಕಾರ್ಯದರ್ಶಿಗಳಿಗೆ ಕರೆ ನೀಡಿದ್ದಾರೆ.
ಸೋಮವಾರ ಎಲ್ಲಾ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ‘ಮಿಶನ್ ಮೋಡ್ನಲ್ಲಿ ಇವುಗಳನ್ನು ದತ್ತು ಪಡೆಯಬೇಕು ಮತ್ತು ವಿವಿಧ ಇಲಾಖೆಗಳು ತಂಡವಾಗಿ ಕಾರ್ಯ ಮಾಡಬೇಕು. ಈ ಮೂಲಕ ಕಡಿಮೆ ಸಮಯದಲ್ಲೇ ಗುರಿ ಸಾಧಿಸಬೇಕು’ ಎಂದು ಮೋದಿ ಹೇಳಿದ್ದಾರೆ.
ಅಧಿಕಾರಿಗಳು ಹಿಂದಿನ ಕಾರ್ಯಶೈಲಿಗಿಂತ ಮೀರಿ ಕಾರ್ಯ ಮಾಡಬೇಕು. ಅವರು ಮನಸ್ಸು ಮಾಡಿದರೆ 1ನೇ ಆರರಷ್ಟು ಜನರನ್ನು ಪರಿವರ್ತನೆ ಮಾಡಬಹುದು ಎಂದರು.
2022ರಲ್ಲಿ ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ವೇಳೆ ಗುರಿ ಸಾಧನೆಗೆ ಮಹತ್ವದ ಯೋಜನೆಗಳನ್ನು ರೂಪಿಸುವಂತೆ ಕರೆ ನೀಡಿದರು.
ಅಲ್ಲದೇ ದೇಶದ ೧೦೦ ಹಿಂದುಳಿದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನಗಳನ್ನು ಆರಂಭಿಸುವಂತೆ ಕರೆ ನೀಡಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.