ಪಾಟ್ನಾ: 12ನೇ ತರಗತಿಯ ಫಲಿತಾಂಶದಲ್ಲಿ ಟಾಪರ್ ಹಗರಣ ಬಯಲಿಗೆ ಬಂದ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ಅಧಿಕಾರಿಗಳ ಮತ್ತು ಶಿಕ್ಷಕರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ ಯಾವ ವಿದ್ಯಾರ್ಥಿಗಳೂ ತೇರ್ಗಡೆಯಾಗದ ಶಾಲೆಗಳ ಶಿಕ್ಷಕರು ಕಠಿಣ ಕ್ರಮಗಳನ್ನು ಎದುರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
'ಈಗಾಗಲೇ ನಾವು ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದ್ದೇವೆ. ತನಿಖೆ ಆರಂಭವಾಗಿದೆ. ಬ್ಲಾಕ್ ಮಟ್ಟದ ಶಿಕ್ಷಣ ಅಧಿಕಾರಿಯಿಂದ ಹಿಡಿದು ಜಿಲ್ಲಾ ಶಿಕ್ಷಣ ಅಧಿಕಾರಿಯವರೆಗೂ ಯಾರೊಬ್ಬರನ್ನೂ ನಾವು ಬಿಡುವುದಿಲ್ಲ. ಕರ್ತವ್ಯ ಮಾಡದ ಶಿಕ್ಷಕರನ್ನೂ ದಂಡಿಸುತ್ತೇವೆ’ ಎಂದು ನಿತೀಶ್ ಹೇಳಿದ್ದಾರೆ.
ಅಲ್ಲದೇ ಕೆಲವರು ಬೇಕಂತಲೇ ಬಿಹಾರದ ಇಮೇಜ್ಗೆ ಧಕ್ಕೆ ತರುವ ಕಾರ್ಯ ಮಾಡುತ್ತಿದ್ದಾರೆ ಎಂದೂ ಆರೋಪಿಸಿದ್ದಾರೆ.
12 ತರಗತಿಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದ ಗಣೇಶ್ ಕುಮಾರ್ ಎಂಬಾತನಿಗೆ ತನ್ನ ವಿಷಯದ ಕನಿಷ್ಠ ಜ್ಞಾನವೂ ಇರಲಿಲ್ಲ. ಮಾತ್ರವಲ್ಲ ಆತನ ವಯಸ್ಸು 42 ಆಗಿದ್ದು, ಇಬ್ಬರು ಮಕ್ಕಳ ತಂದೆಯಾಗಿದ್ದ. ಆದರೆ ತನ್ನ ವಯಸ್ಸಿನ ಬಗ್ಗೆ ಸುಳ್ಳು ಪ್ರಮಾಣ ಪತ್ರ ಮಾಡಿಕೊಂಡಿದ್ದ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.