ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 3 ವರ್ಷಗಳ ಸಾಧನೆಗಳನ್ನು ಜನರಿಗೆ ತಲುಪಿಸುವ ಸಲುವಾಗಿ ಮಂಗಳೂರು ಪುರಭವನದಲ್ಲಿ ದಿನಾಂಕ 7-6-2017 ರಂದು ಹಮ್ಮಿಕೊಳ್ಳಲಾದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸಾಧನಾ ಸಮಾವೇಶದ ಉದ್ಘಾಟನೆಯನ್ನು ಕೇಂದ್ರದ ಕಾನೂನು ಮತ್ತು ನ್ಯಾಯ, ಮಾಹಿತಿ ತಂತ್ರಜ್ಞಾನದ ರಾಜ್ಯ ಖಾತೆ ಸಚಿವರಾದ ಶ್ರೀ ಪಿ.ಪಿ. ಚೌಧರಿಯವರು ನೆರವೇರಿಸಿದರು.
ಅಧ್ಯಕ್ಷತೆಯನ್ನು ದ.ಕ. ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು ಅವರು ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕರಾದ ಎಸ್. ಅಂಗಾರ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕೋಟ ಶ್ರೀನಿವಾಸ್ ಪೂಜಾರಿ, ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಶ್ರೀಮತಿ ಕಸ್ತೂರಿ ಪಂಜ ಸೇರಿದಂತೆ ದ.ಕ. ಜಿಲ್ಲೆಯ ಎಲ್ಲಾ ಮಾಜಿ ಶಾಸಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಸಮಾವೇಶದಲ್ಲಿ ಬಿಜೆಪಿ ದ.ಕ. ಜಿಲ್ಲೆಯ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.