ನವದೆಹಲಿ: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಅನಗತ್ಯವಾಗಿ ರೈತರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವ ಪ್ರತಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ತಮ್ಮ ವೈಯಕ್ತಿಕ ಲಾಭಕ್ಕಾಗಿ ರೈತರ ಹಿತಾಸಕ್ತಿಯೊಂದಿಗೆ ಆಟವಾಡಬೇಡಿ ಎಂದು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.
‘ಕೆಲವು ರಾಜಕೀಯ ಪಕ್ಷಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ರೈತರ ಪ್ರತಿಭಟನೆಗಳನ್ನು ಪರಿಮಿತಿಯಿಂದ ಹೊರಕ್ಕೆ ಕೊಂಡೊಯ್ಯುತ್ತಿದೆ. ಇಂತಹ ಕುತಂತ್ರಗಳನ್ನು ಅವರು ಮಾಡಬಾರದು ಮತ್ತು ರೈತರ ಹಿತಾಸಕ್ತಿಯೊಂದಿಗೆ ಚೆಲ್ಲಾಟವಾಡಬಾರದು’ ಎಂದಿದ್ದಾರೆ.
ಅಲ್ಲದೇ ಮುಂಬರುವ ವರ್ಷಗಳಲ್ಲಿ ರೈತರ ಆದಾಯವನ್ನು ದ್ವಿಗುಣ ಗೊಳಿಸಲು ನಾವು ವಿಫಲರಾದರೆ ನಮ್ಮನ್ನು ಅಧಿಕಾರದಿಂದ ತೆಗೆದು ಹಾಕಿ ಎಂದು ರಾಜನಾಥ್ ಜನರಿಗೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.