ಲಕ್ನೋ: ತನ್ನ ರಾಜ್ಯದ ಪ್ರವಾಸೋದ್ಯಮವನ್ನು, ಅದರಲ್ಲೂ ಪ್ರಮುಖವಾಗಿ ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವುದಕ್ಕಾಗಿ ಪ್ರಮುಖ ಕ್ಷೇತ್ರಗಳಿಗೆ ವಾಯು ಸಂಪರ್ಕ ಕಲ್ಪಿಸಿಕೊಡುವಂತೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಅವರ ಸಂಪುಟ ಸಚಿವರಾದ ಸಿದ್ದಾರ್ಥ್ ನಾಥ್ ಸಿಂಗ್ ಮತ್ತು ನಂದ್ ಗೋಪಾಲ್ ಗುಪ್ತಾ ಅವರು ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಜಯಂತ್ ಸಿನ್ಹಾ ಅವರನ್ನು ಭೇಟಿಯಾಗಿ ಈ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದರು.
ವಾರಣಾಸಿ, ಕುಶಿನಗರ, ಮೀರತ್, ಅಲಹಾಬಾದ್ ಮುಂತಾದ ಪ್ರಮುಖ ನಗರಗಳ ನಡುವೆ ವಾಯು ಸಂಪರ್ಕ ಕಲ್ಪಿಸುವಂತೆ ಪ್ರಸ್ತಾವನೆಯಲ್ಲಿ ಕೋರಲಾಗಿದೆ.
ಈ ಬಗ್ಗೆ ಮಾತುಕತೆ ನಡೆಸುವ ಸಲುವಾಗಿ ಜೂನ್ 14ರಂದು ಜಯಂತ್ ಸಿನ್ಹಾ ಅವರು ಸಿಎಂ ಯೋಗಿ ಆದಿತ್ಯನಾಥ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.