ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್ ಕೋರ್ಸುಗಳ ಶುಲ್ಕವನ್ನು ಏರಿಕೆ ಮಾಡಲಾಗುತ್ತಿಲ್ಲ. ಇದರಿಂದಾಗಿ ಸೀಟು ಆಕಾಂಕ್ಷಿಗಳು ನಿರಾಳರಾಗಿದ್ದಾರೆ.
COMEDK ಮತ್ತು ರಾಜ್ಯ ಸರ್ಕಾರಗಳು ಸೇರಿ ಒಮ್ಮತದಿಂದ ಶುಲ್ಕ ಏರಿಕೆ ಮಾಡದೇ ಇರುವ ನಿರ್ಧಾರವನ್ನು ತೆಗೆದುಕೊಂಡಿದೆ.
ಕಳೆದ ವರ್ಷದ ರೀತಿಯ ಸೀಟು ಮ್ಯಾಟ್ರಿಕ್ಸ್ ಮತ್ತು ಶುಲ್ಕವನ್ನು ಈ ವರ್ಷವೂ ಮುಂದುವರೆಸಲಾಗುತ್ತದೆ. ಹೀಗಾಗೀ ಕಳೆದ ವರ್ಷದಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಶೇ.೪೦ರಷ್ಟು ಸೀಟುಗಳನ್ನು ಸರ್ಕಾರಿ ಖೋಟ ಸೀಟು ಎಂದು ಪರಿಗಣಿಸಲಾಗುತ್ತದೆ.
ಎಂಜಿನಿಯರಿಂಗ್ ಕಾಲೇಜುಗಳು ಶುಲ್ಕದಲ್ಲಿ ಶೇ.10 ರಷ್ಟು ಹೆಚ್ಚಳ ಮಾಡಬೇಕು ಎಂದು ಬೇಡಿಕೆಯಿಡುತ್ತಿವೆ. ಆದರೆ ಬರ ಪರಿಸ್ಥಿತಿ ಇರುವುದರಿಂದ ಸರ್ಕಾರ ಇದಕ್ಕೆ ವಿರೋಧಿಸಿದೆ. ಅಲ್ಲದೇ ಈ ಬಗ್ಗೆ ಸರ್ಕಾರ ಖಾಸಗಿ ಕಾಲೇಜುಗಳನ್ನು ಒಪ್ಪಿಸಲು ಸಫಲವಾಗಿದೆ ಎಂದು ಉನ್ನತ ಶಿಕ್ಷಣ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.