ನವದೆಹಲಿ: ದೇಶದಾದ್ಯಂತ ರೈಲ್ವೇ ನಿಲ್ದಾಣಗಳಲ್ಲಿ ಜನೌಷಧಿ ಅಂಗಡಿಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಸಾಮಾನ್ಯ ನಾಗರಿಕನಿಗೂ ಔಷಧಿಗಳು ಲಭ್ಯವಾಗಲಿ ಎಂಬ ಕಾರಣಕ್ಕಾಗಿ ಈ ಯೋಜನೆ ಆರಂಭಿಸಲಾಗುತ್ತಿದೆ.
ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಮೂಲಕ ಜನರಿಗೆ ಕಡಿಮೆ ದರದಗಳಲ್ಲಿ ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸುವ ಅಭಿಯಾನವನ್ನು ಸರ್ಕಾರ ಆರಂಭಿಸಿದೆ.
ರೈಲ್ವೇ ನಿಲ್ದಾಣ, ಡಿಸ್ಪೆನ್ಸರಿಗಳಲ್ಲಿ, ವರ್ಕ್ಶಾಪ್ಗಳಲ್ಲಿ, ರೈಲ್ವೆ ಆವರಣದ ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.
ಇದರಿಂದಾಗಿ ಜನರಿಕ್ ಔಷಧಿಗಳು ರೈಲ್ವೇ ಸಿಬ್ಬಂದಿ ಸೇರಿದಂತೆ ಎಲ್ಲಾ ನಾಗರಿಕರಿಗೂ ಕಡಿಮೆ ದರದಲ್ಲಿ ಲಭ್ಯವಾಗಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.