ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂತಾರಾಷ್ಟ್ರೀಯ ಯೋಗ ದಿನವಾದ ಜೂನ್ 21 ರಂದು ಮಹತ್ತರ ಯೋಜನೆಯೊಂದನ್ನು ರೂಪಿಸಿದೆ.
ಅಂತಾರಾಷ್ಟ್ರೀಯ ಯೋಗ ದಿನವನ್ನು ದೇಶ ವಿದೇಶಗಳಲ್ಲಿ ಯಶಸ್ವಿಗೊಳಿಸಲು ಆಯುಷ್ ಸಚಿವಾಲಯ ಬಿಡುವಿಲ್ಲದೇ ಶ್ರಮಿಸುತ್ತಿದೆ. ಅಲ್ಲದೇ ವಿವಿಧ ದೇಶಗಳ ರಾಯಭಾರಿಗಳು ಹಾಗೂ ದೂತವಾಸಗಳಿಗೆ ಪತ್ರಗಳನ್ನು ಕಳುಹಿಸಿ ಆ ದಿನದಂದು ಯೋಗಾಸನ ಮಾಡುವ ಮೂಲಕ ’ಜೂನ್ 21- ಯೋಗ ದಿನ’ವನ್ನು ಯಶಸ್ವಿ ಮಾಡಲು ಕೇಳಿಕೊಂಡಿದೆ.
ಜೂನ್ 21 ರಂದು 74 ನಗರಗಳಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಕೇಂದ್ರ ಸರ್ಕಾರದ 74 ಸಚಿವರುಗಳು ಪಾಲ್ಗೊಳ್ಳಲಿದ್ದಾರೆ.
ಉತ್ತರಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಆಯುಷ್ ಸಚಿವಾಲಯದ ಮಂತ್ರಿ ಶ್ರೀಪಾದ್ ನಾಯಕ್ ಪಾಲ್ಗೊಳ್ಳಲಿದ್ದಾರೆ.
ಅಹಮದಾಬಾದ್ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಯೋಗ ಮಾಡಲಿದ್ದಾರೆ. ಹಿಮಾಚಲಪ್ರದೇಶದ ಸುಜನಪುರ್ ತಿರ್ಹಾದಲ್ಲಿ ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್, ಮಾಹಿತಿ ಹಾಗೂ ಪ್ರಸಾರ ಸಚಿವರಾದ ವೆಂಕಯ್ಯ ನಾಯ್ಡು ದೆಹಲಿಯಲ್ಲಿ ನಡೆಯುವ ಯೋಗ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಕೇಂದ್ರ ಸಚಿವ ರವಿಶಂಕರ ಪ್ರಸಾದ್, ನಿತಿನ್ ಗಡ್ಕರಿ, ಜೆ.ಪಿ ನಡ್ಡಾ, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್ ಮತ್ತು ಪಿಯೂಷ್ ಗೋಯಲ್ ಕ್ರಮವಾಗಿ ಪಾಟ್ನಾ, ನಾಗ್ಪುರ್, ಚಂಡೀಗಢ್, ಕೊಚ್ಚಿ, ಭುವನೇಶ್ವರ ಮತ್ತು ವಿಶಾಖಪಟ್ಟಣಂಗಳಲ್ಲಿ ಏರ್ಪಡಿಸಲಾಗಿರುವ ಯೋಗ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿರಲಿದ್ದಾರೆ.
2015 ರಿಂದ ಪ್ರತಿ ವರ್ಷ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವಾಗಿ ಆಚರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.