ಚೆನ್ನೈ : ತೃತೀಯ ಲಿಂಗಿಗಳಿಗೆ ಉಚಿತ ಶಿಕ್ಷಣವನ್ನು ಒದಗಿಸುವ ಮಹತ್ವದ ನಿರ್ಧಾರವನ್ನು ತಮಿಳುನಾಡು ಸರ್ಕಾರ ಘೋಷಿಸಿದೆ.
ತಿರುನಲ್ವೇಲಿಯಲ್ಲಿನ ಮನೋನ್ಮಾನಂ ಸುಂದರಾರ್ ವಿಶ್ವವಿದ್ಯಾಲಯದಲ್ಲಿ ಎಲ್ಲಾ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡುವುದಾಗಿ ಅಲ್ಲಿನ ಶಿಕ್ಷಣ ಸಚಿವ ಕೆ. ಪಿ. ಅನ್ಬಜಗನ್ ಘೋಷಿಸಿದ್ದಾರೆ. ಅಲ್ಲದೆ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯಡಿ ವಾರ್ಷಿಕ 3,000 ರೂ.ಗಳನ್ನು ಪಡೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ತಮಿಳುನಾಡು ಸರ್ಕಾರದ ಈ ಮಹತ್ವದ ನಿರ್ಧಾರವನ್ನು ಸ್ವಾಗತಿಸಿರುವ ತೃತೀಯ ಲಿಂಗಿ ಹಕ್ಕುಗಳ ಹೋರಾಟಗಾರ್ತಿ ಕಲ್ಕಿ ಸುಬ್ರಹ್ಮಣ್ಯಂ ಅವರು ಇದೊಂದು ಅತ್ಯುನ್ನತ ನಿರ್ಧಾರವಾಗಿದ್ದು ಶಿಕ್ಷಣಕ್ಕೆ ಪ್ರತಿಯೊಬ್ಬರ ಬದುಕನ್ನು, ಅದರಲ್ಲೂ ಮುಖ್ಯವಾಗಿ ಬಡ ತೃತೀಯ ಲಿಂಗಿಗಳ ಬದುಕನ್ನು ಬದಲಾಯಿಸುವ ಶಕ್ತಿ ಇದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.