ಮುಂಬೈ: ಟಾಡಾ ನ್ಯಾಯಾಲಯವು ಇಂದು 1993 ರ ಮುಂಬೈ ಸ್ಫೋಟ ಪ್ರಕರಣದ ತೀರ್ಪನ್ನು ನೀಡಿದ್ದು, ಅಬು ಸಲೇಂ ಸೇರಿದಂತೆ ಇತರ 5 ಮಂದಿ ಆರೋಪಿಗಳನ್ನು ತಪ್ಪಿತಸ್ಥರೆಂದು ತೀರ್ಪು ಪ್ರಕಟಿಸಿದೆ.
24 ವರ್ಷಗಳ ನಂತರ 1993 ರ ಮುಂಬೈ ಸರಣಿ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಗಿದೆ.
1993ರ ಮಾರ್ಚ್ 12ರಂದು ಮುಂಬೈನ ಏರ್ ಇಂಡಿಯಾ ಬಿಲ್ಡಿಂಗ್, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೇರಿದಂತೆ 12 ಸ್ಥಳಗಳಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಸರಣಿ ಸ್ಫೋಟದಲ್ಲಿ 257 ಜನರು ಮೃತಪಟ್ಟಿದ್ದು, 713 ಜನರಿಗೆ ಗಂಭೀರ ಗಾಯಗಳಾಗಿದ್ದು ಸುಮಾರು 27 ಕೋಟಿ ರೂ. ಮೌಲ್ಯದ ಆಸ್ತಿ ಹಾನಿಯಾಗಿತ್ತು.
ಈ ಪ್ರಕರಣದಲ್ಲಿ ಅಬು ಸಲೇಂ, ಮುಸ್ತಾಫಾ ದೋಸಾ, ಮೊಹಮ್ಮದ್ ತಾಹೀರ್ ಮರ್ಚೆಂಟ್ ಅಲಿಯಾಸ್ ತಾಹಿರ್ ತಾಕ್ಲಾ, ಕರಿಮುಲ್ಲಾ ಖಾನ್, ರಿಯಾಜ್ ಸಿದ್ಧಿಕಿ ಮತ್ತು ಫಿರೋಜ್ ಅಬ್ದುಲ್ ರಶೀದ್ ಖಾನ್ ಅವರನ್ನು ತಪ್ಪಿತಸ್ಥರು ಎಂದು ತೀರ್ಪು ಪ್ರಕಟಿಸಿಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ದೀಪಕ್ ಸಾಲ್ವೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.