ನವದೆಹಲಿ: ಪ್ರಧಾನ ಮಂತ್ರಿ ಆವಾಜ್ ಯೋಜನೆಯಡಿ 4,720 ಪಟ್ಟಣಗಳಲ್ಲಿ ಮತ್ತು ನಗರಗಳಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಸುಮಾರು 20 ಲಕ್ಷ ಮನೆಗಳನ್ನು ನಿರ್ಮಿಸಲು ಅನುಮೋದನೆ ಪಡೆಯಲಾಗಿದೆ ಎಂದು ಕೇಂದ್ರ ವಸತಿ ಸಚಿವ ವೆಂಕಯ್ಯ ನಾಯ್ಡು ಸೋಮವಾರ ಮಾಹಿತಿ ನೀಡಿದ್ದಾರೆ.
ಆಂಧ್ರಪ್ರದೇಶದ ವಿಜಯವಾಡದಲ್ಲಿ 1,09,000 ವಸತಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರ 3 ವರ್ಷಗಳ ಆಡಳಿತದಲ್ಲಿ ವಸತಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ ಎಂದಿದ್ದಾರೆ.
ಯುಪಿಎ ಸರ್ಕಾರದ 10 ವರ್ಷಗಳ ಆಡಳಿತದಲ್ಲಿ 13, 82,768 ವಸತಿಗಳು ಮಾತ್ರ ನಿರ್ಮಾಣವಾಗಿದ್ದವು ಎಂದಿದ್ದಾರೆ.
2020ರ ವೇಳೆಗೆ ಎಲ್ಲರಿಗೂ ವಸತಿ ಕಲ್ಪಿಸುವುದು ಸವಾಲಿನ ಕಾರ್ಯವಾಗಿದೆ. ಇದಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬಯಸಿದ್ದೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.