ವಿಶ್ವಸಂಸ್ಥೆ: 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ನ್ಯೂಯಾರ್ಕ್ನಲ್ಲಿನ ವಿಶ್ವಸಂಸ್ಥೆಯ ಕಟ್ಟಡವನ್ನು ‘ಯೋಗ’ ಎಂದು ಬರೆಯಲಾದ ವಿದ್ಯುತ್ ದೀಪದಿಂದ ಬೆಳಗಿಸಲಾಯಿತು.
ಬಾಲಿವುಡ್ ನಟ ಅನುಪಮ್ ಖೇರ್ ಅವರು ಈ ದೀಪವನ್ನು ಬೆಳಗಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಖೇರ್, ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಿದ್ಧತೆಯಾಗಿ ನ್ಯೂಯಾರ್ಕ್ನ ವಿಶ್ವಸಂಸ್ಥೆ ಕಟ್ಟಡದ ವಿದ್ಯುತ್ ದೀಪ ಬೆಳಗಿಸಿದ್ದು ಮಹತ್ತರವಾದ ಗೌರವವಾಗಿದೆ. ಇದಕ್ಕಾಗಿ ಭಾರತದ ವಿಶ್ವಸಂಸ್ಥೆ ರಾಯಭಾರಿ ಸೈಯದ್ ಅಕ್ಬರುದ್ದೀನ್ ಅವರಿಗೆ ಕೃತಜ್ಞತೆಗಳು’ ಎಂದಿದ್ದಾರೆ.
ಅಲ್ಲದೇ ಈ ಬಗೆಗಿನ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಂಚಿಕೊಂಡಿದ್ದಾರೆ.
ಯೋಗ ದಿನದ ಹಿನ್ನಲೆಯಲ್ಲಿ ವಿಶ್ವಸಂಸ್ಥೆಯಲ್ಲಿ ವಿವಿಧ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.