ವಾಷಿಂಗ್ಟನ್: ಭಯೋತ್ಪಾದನೆಗೆ ಬೆಂಬಲ ನೀಡುವ ಪಾಕಿಸ್ಥಾನದ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಡ್ರೋನ್ ದಾಳಿಯನ್ನು ಪಾಕಿಸ್ಥಾನದತ್ತವೂ ವಿಸ್ತರಣೆ ಮಾಡುವ ಸುಳಿವು ನೀಡಿದ್ದಾರೆ.
ಪಾಕಿಸ್ಥಾನ ಮೂಲದ ಭಯೋತ್ಪಾದಕರನ್ನು ಹತ್ತಿಕ್ಕುವ ಅಲ್ಲದೇ ಆ ದೇಶದೊಂದಿಗಿನ ಬಾಂಧವ್ಯ ಕಡಿದುಕೊಳ್ಳುವ ಬಗ್ಗೆ ಟ್ರಂಪ್ ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಅಮೆರಿಕಾದ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.
ಡ್ರೋನ್ ದಾಳಿಯನ್ನು ವಿಸ್ತರಿಸುವ, ಪಾಕ್ಗೆ ನೀಡುತ್ತಿರುವ ಅನುದಾನವನ್ನು ಕಡಿತಗೊಳಿಸುವ ಅಥವಾ ಸಂಪೂರ್ಣ ನಿಲ್ಲಿಸುವ, ನಾನ್-ನ್ಯಾಟೋ ಸ್ಟೇಟಸ್ನ್ನು ತೆಗೆದು ಹಾಕುವತ್ತ ಅವರು ಚಿಂತಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.