ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಲಕ್ನೋದ ರಮಾಬಾಯ್ ಅಂಬೇಡ್ಕಲರ್ ಮೈದಾನದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡು ವಿವಿಧ ಆಸನಗಳನ್ನು ಪ್ರದರ್ಶಿಸಿದರು.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿದಂತೆ ಸಾವಿರಾರು ಮಂದಿ ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಜನರು ಮತ್ತು ಜಾಗತಿಕ ಸಮುದಾಯವನ್ನು ಒಗ್ಗೂಡಿಸುವಲ್ಲಿ ಯೋಗ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.
ದೇಹ, ಮನಸ್ಸು, ಆತ್ಮವನ್ನು ಒಗ್ಗೂಡಿಸುವ ಸಾಮರ್ಥ್ಯ ಇರುವ ಯೋಗವು ಎಲ್ಲಾ ಭಾಷೆ, ಸಂಸ್ಕೃತಿಗಳ ಗಡಿಯನ್ನು ಮೀರಿ ಜಗತ್ತನ್ನು ಒಂದುಗೂಡಿಸುತ್ತಿದೆ ಎಂದರು.
ಈ ಹಿಂದೆ ಯೋಗವು ಕೇವಲ ಹಿಮಾಲಯದಲ್ಲಿನ ಸಾಧು ಸಂತರಿಗೆ ಮಾತ್ರ ಮೀಸಲಾಗಿತ್ತು. ಆದರೆ ಈಗ ಯೋಗ ಎಲ್ಲರ ದೈನಂದಿನ ಬದುಕಿನ ಭಾಗವಾಗಿದೆ ಎಂದರು.
ಕೇವಲ ದೈಹಿಕವಾಗಿ ಫಿಟ್ ಆಗಿರುವುದಕ್ಕಿಂತ ಯೋಗದ ಮೂಲಕ ಆರೋಗ್ಯ ಪ್ರಾಪ್ತಿಯಾಗುವುದು ಅತೀ ಮುಖ್ಯ ಎಂದು ಪ್ರತಿಪಾದಿಸಿದರು.
ಈ ಯೋಗ ಸಮಾರಂಭದಲ್ಲಿ ಸುಮಾರು ೫೦ ಸಾವಿರ ಮಂದಿ ಭಾಗಿಯಾಗಿ ವಿವಿಧ ಆಸನಗಳನ್ನು ಪ್ರದರ್ಶಿಸಿದ್ದು ವಿಶೇಷ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.