ಶಿಮ್ಲಾ: ಬರೋಬ್ಬರಿ ಮೂರು ದಶಕಗಳ ಬಳಿಕ ಶಿಮ್ಲಾ ಮುನ್ಸಿಪಲ್ ಕಾರ್ಪೋರೇಶನ್ನ ಮೇಯರ್ ಮತ್ತು ಉಪ ಮೇಯರ್ ಸ್ಥಾನವನ್ನು ಬಿಜೆಪಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಅಲ್ಲಿನ ನೂತನ ಮೇಯರ್ ಆಗಿ ಬಿಜೆಪಿಯ ಕುಸುಮ್ ಸದ್ರೆತ್ ಅವರನ್ನು ಮತ್ತು ಉಪ ಮೇಯರ್ ಆಗಿ ಬಿಜೆಪಿಯ ರಾಕೇಶ್ ಶರ್ಮಾ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ.
ಚುನಾವಣಾ ಪ್ರಕ್ರಿಯೆ ನಡೆಸಿದ ನಗರಾಭಿವೃದ್ಧಿ ಇಲಾಖೆ ನಿರ್ದೇಶಕ ಡಿ.ಕೆ.ಗುಪ್ತಾ ಅವರು ಸದ್ರೆತ್ ಮತ್ತು ಶರ್ಮಾ ಆಯ್ಕೆಯನ್ನು ದೃಢಪಡಿಸಿದ್ದಾರೆ.
34 ಸ್ಥಾನಗಳುಳ್ಳ ಶಿಮ್ಲಾ ಕಾರ್ಪೋರೇಶನ್ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳನ್ನು ಗಳಿಸಿದೆ. ಸರಳ ಬಹುಮತದಿಂದ ಒಂದು ಸ್ಥಾನ ಕಡಿಮೆಯಾಗಿದೆ.
ಕಳೆದ 26 ವರ್ಷಗಳಿಂದ ಇಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ 12 ಸ್ಥಾನ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.