ಮಂಗಳೂರು : ಶಾರದಾ ವಿದ್ಯಾಲಯದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯಂಗವಾಗಿ ಆಯುಷ್ ಪಠ್ಯಕ್ರಮದ ವಿವಿಧ ಯೋಗಾಸನಗಳನ್ನು ವಿದ್ಯಾಲಯದ ವಿದ್ಯಾರ್ಥಿಗಳು ಪ್ರದರ್ಶನವಿತ್ತರು. ಯೋಗ ಪ್ರದರ್ಶನ ಬಳಿಕ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕರು ಯೋಗ ಪ್ರದರ್ಶನಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡುತ್ತಾ ಯೋಗದ ಮಹತ್ವವನ್ನು ವಿವರಿಸಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ವಿದ್ಯಾಲಯದ ಆಡಳಿತ ಮಂಡಳಿ ಟ್ರಸ್ಟಿಗಳಾದ ಶ್ರೀ ಪ್ರದೀಪ ಕುಮಾರ ಕಲ್ಕೂರ ಕೂಡಾ ವಿದ್ಯಾಲಯಗಳನ್ನು ಅಭಿನಂದಿಸಿ ಮಾತನಾಡಿದರು. ಶ್ರೀ ಪತಂಜಲಿ ಯೋಗ ಸಮಿತಿ (ರಿ) ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ಇದರ ಯೋಗ ಶಿಕ್ಷಕರಾದ ಶ್ರೀ ಭಾಸ್ಕರ್ ವಿದ್ಯಾರ್ಥಿಗಳ ಯೋಗ ಪ್ರದರ್ಶನಕ್ಕೆ ಹರ್ಷ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಶ್ರೀ ಪತಂಜಲಿ ಯೋಗ ಸಮಿತಿ (ರಿ) ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ಇದರ ಮತ್ತೊರ್ವ ಯೋಗ ಶಿಕ್ಷಕಿ ಶ್ರೀಮತಿ ಸುಪ್ರೀಯಾ, ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಸುನೀತಾ ವಿ ಮಡಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಉಪ-ಪ್ರಾಂಶುಪಾಲ ಶ್ರೀ ದಯಾನಂದ ಕಟೀಲ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕರು, ಯೋಗ ಶಿಕ್ಷಕರು ಹಾಗೂ ಅಧ್ಯಾಪಕ ವೃಂದ ಸಹಕರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.