ಸುಳ್ಯ : ದಿನಾಂಕ 21-6-2017 ರಂದು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯಾಲಯದಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷಡಾ|| ಚಂದ್ರಶೇಖರ ದಾಮ್ಲೆ ಅವರು ವಿಶ್ವಯೋಗ ದಿನದ ಮಹತ್ವ ಮತ್ತು ದೈನಂದಿನ ಜೀವನದಲ್ಲಿ ಅದರ ಅಳವಡಿಕೆಯ ಅನಿವಾರ್ಯತೆ ಮತ್ತು ಅವಶ್ಯಕತೆಯ ಬಗ್ಗೆ ತಿಳಿಸಿದರು. ಬಳಿಕ ಸೂರ್ಯ ನಮಸ್ಕಾರ, ಧ್ಯಾನ ಮತ್ತು ಪ್ರಾಣಾಯಾಮಗಳನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಸೂರ್ಯ ಆಲಯದಲ್ಲಿ ಸಾರ್ವಜನಿಕರಿಗೆ ಯೋಗದ ಚಟುವಟಿಕೆಗಾಗಿ ಮುಕ್ತ ಅವಕಾಶ ನೀಡಿದ್ದು, ಹೆತ್ತವರು ಈ ಅವಕಾಶದ ಸದುಪಯೋಗ ಪಡೆದುಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.