ನವದೆಹಲಿ : ಅನಾಣ್ಯೀಕರಣಗೊಂಡ ಬಳಿಕ ಬ್ಯಾಂಕ್ ಮತ್ತು ಪೋಸ್ಟ್ಅಫೀಸ್ಗಳಲ್ಲಿ ಸಂಗ್ರಹಿಸಲಾದ ಹಳೆಯ ರೂ. 500 ಮತ್ತು ರೂ. 1000 ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಜಮೆ ಮಾಡಲು ಸರ್ಕಾರ ಅನುಮತಿ ನೀಡಿದೆ.
ಈ ಕುರಿತಂತೆ ಹಣಕಾಸು ಸಚಿವಾಲಯವು ಪ್ರಕಟಣೆಯನ್ನು ಹೊರಡಿಸಿದ್ದು, ಸಹಕಾರಿ ಬ್ಯಾಂಕ್ಗಳು, ಪೋಸ್ಟ್ ಆಫೀಸ್ಗಳಲ್ಲಿ ಠೇವಣಿಯಾಗಿರುವ ಹಳೆಯ ನೋಟುಗಳನ್ನು ಜುಲೈ 20ರೊಳಗೆ ಆರ್ಬಿಐನೊಂದಿಗೆ ವಿನಿಮಯ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.
ಕಪ್ಪು ಹಣ ಮತ್ತು ಖೋಟಾ ನೋಟು ಹಾವಳಿ ನಿಗ್ರಹಿಸಲು ಸರ್ಕಾರವು 2016 ರ ನವೆಂಬರ್ 8 ರಂದು ರೂ. 500 ಮತ್ತು ರೂ. 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿತ್ತು, ಬಳಿಕ ಡಿಸೆಂಬರ್ 31 ರ ವರೆಗೆ ಹಳೆಯ ನೋಟುಗಳನ್ನು ಜಮೆ ಮಾಡಲು ಅವಕಾಶ ನೀಡಲಾಗಿತ್ತು.
ಇದೀಗ ಆರ್ಬಿಐನಲ್ಲಿ ಹಳೆಯ ನೋಟುಗಳನ್ನು ಜಮಾ ಮಾಡಲು ಬ್ಯಾಂಕ್, ಸಹಕಾರಿ ಬ್ಯಾಂಕ್ ಮತ್ತು ಪೋಸ್ಟ್ ಆಫೀಸ್ಗಳಿಗೆ ಎರಡನೇ ಬಾರಿ ಅವಕಾಶ ಕಲ್ಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.