ನವದೆಹಲಿ: ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ನಾಥ್ ಕೋವಿಂದ್ ಅವರು ಜೂನ್ 23ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳ ಎಲ್ಲಾ ಮುಖ್ಯಮಂತ್ರಿಗಳು, ಉನ್ನತ ನಾಯಕರುಗಳು ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಮಪತ್ರ ಪ್ರಕ್ರಿಯೆಯ ವೇಳೆ ಲೋಕಸಭಾದ ಸೆಕ್ರಟರಿ ಜನರಲ್ ಉಪಸ್ಥಿತರಿರಲಿದ್ದಾರೆ.
ಕೋವಿಂದ್ ನಾಮಪತ್ರಕ್ಕೆ ಈಗಾಗಲೇ ಬಿಜೆಪಿ ನಾಲ್ಕು ಸೆಟ್ಗಳನ್ನು ಸಿದ್ಧಪಡಿಸಿಕೊಂಡಿದೆ ಎನ್ನಲಾಗಿದೆ.
ಕೋವಿಂದ್ ಅವರು ತಮ್ಮ ಪತ್ನಿಯೊಂದಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.