ಲಕ್ನೋ: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರ ತನ್ನ ರಾಜ್ಯದ ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್ನ್ನು ಒದಗಿಸಲು ಮುಂದಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಲ್ಲಿನ ಸಂಪುಟ ಸಚಿವ ಶ್ರೀಕಾಂತ್ ಶರ್ಮಾ ಅವರು, ‘ಎಲ್ಲರಿಗೂ ವಿದ್ಯುತ್’ ಯೋಜನೆಯಡಿ ನಗರದ ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕುಟುಂಬಗಳು ಉಚಿತ ವಿದ್ಯುತ್ ಪಡೆಯಲಿದೆ ಎಂದು ಘೋಷಿಸಿದ್ದಾರೆ.
ನಗರದಲ್ಲಿ ಬಿಪಿಎಲ್ ಕುಟುಂಬಗಳು ಉಚಿತ ವಿದ್ಯುತ್ ಸಂಪರ್ಕವನ್ನು ಪಡೆದುಕೊಳ್ಳಲಿದೆ. ಎಲ್ಲರಿಗೂ ವಿದ್ಯುತ್ ನೀಡಬೇಕು ಎಂಬ ಯೋಜನೆಯ ಭಾಗವಾಗಿ ಇದನ್ನು ತರಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯುತ್ ಕಳ್ಳತನ ತಡೆಗೂ ಇದು ಪೂರಕವಾಗಲಿದೆ ಎಂದು ಅವರು ಹೇಳಿದ್ದಾರೆ.
ಅಲ್ಲದೇ ಹೊಸ ನಗರ ಪಂಚಾಯತ್ ಮತ್ತು ಹೊಸ ಮೆಡಿಕಲ್ ಇನ್ಸುರೆನ್ಸ್ ಸೇವೆಗಳನ್ನೂ ಆರಂಭ ಮಾಡುವುದಾಗಿ ಅವರು ಘೋಷಣೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.