ಪಾಟ್ನಾ: ರಾಜಕೀಯವಾಗಿ ಅತಿ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ ತಿಳಿಸಿದ್ದಾರೆ.
ಬಿಹಾರದಲ್ಲಿ ಚುನಾವಣೆಯ ವೇಳೆ ತೋಳ್ಬಲದ ಪ್ರದರ್ಶನಗಳು ಹೆಚ್ಚಾಗಿ ನಡೆಯುವ ಹಿನ್ನಲೆಯಲ್ಲಿ ಶಾಂತಿಯುತ ಮತದಾನಕ್ಕಾಗಿ ಹೆಚ್ಚಿನ ಸಂಖ್ಯೆಯ ಕೇಂದ್ರೀಯ ಪಡೆಗಳನ್ನು ನಿಯೋಜಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಬಿಹಾರ ಚುನಾವಣೆಯನ್ನು ‘ಎಲ್ಲಾ ಚುನಾವಣೆಗಳ ತಾಯಿ’ ಎಂದು ವಿಶ್ಲೇಷಿಸಿರುವ ಝೈದಿ, ಚುನಾವಣೆಯ ಸಂಪೂರ್ಣ ಪ್ರಕ್ರಿಯೆಯನ್ನು ಜುಲೈ31ಕ್ಕೆ ಅಂತಿಮಗೊಳಿಸುವುದಾಗಿ ತಿಳಿಸಿದ್ದಾರೆ.
ಈ ಬಾರಿ ಜನತಾ ಪರಿವಾರಗಳು ಒಟ್ಟಾಗಿ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಎದುರಿಸಲಿದ್ದು, ಇದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲವನ್ನು ಮೂಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.