ಹುಬ್ಬಳ್ಳಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿಸಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ’ನಮ್ಮ ಉತ್ತರ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್’ ಸೇರಿದಂತೆ ಒಟ್ಟು 30 ಸಂಘಟನೆಗಳನ್ನು ರಚಿಸಲಾಗುವುದು ಎಂದು ಕಾಂಗ್ರೆಸ್ ಶಾಸಕ ನಡಹಳ್ಳಿ ಎ.ಎಸ್.ಪಾಟೀಲ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡದೇ ಇರುವ ಹಿನ್ನೆಲೆಯಲ್ಲಿ ಈ ಭಾಗದ ಸಾಹಿತಿಗಳನ್ನೊಳಗೊಂಡ ’ನಮ್ಮ ಉತ್ತರ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್’ ಸ್ಥಾಪಿಸಲು ಯೋಚಿಸಲಾಗಿದೆ. ಸರ್ವ ಧರ್ಮಗುರುಗಳನ್ನೊಳಗೊಂಡ ನಮ್ಮ ಉತ್ತರ ಕರ್ನಾಟಕ ಧಾರ್ಮಿಕ ವೇದಿಕೆ, ನಮ್ಮ ಉತ್ತರ ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಉತ್ತರ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ 30 ಸಂಘಟನೆಗಳನ್ನು ಅಸ್ತಿತ್ವಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.
ಈ ಯೋಜನೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಜೂ.15ರಿಂದ ಉತ್ತರ ಕರ್ನಾಟಕದ 13 ಜಿಲ್ಲೆಗಳು ಹಾಗೂ 81 ತಾಲೂಕುಗಳಲ್ಲಿ ಜನಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಮುಂದೆ ಸಂಘಟನೆಗಳನ್ನು ರೂಪಿಸಿ, ನಾಲ್ಕು ಮಂದಿಯ ಕೋರ್ ಕಮಿಟಿಯೊಂದಿಗೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
2018ರ ಒಳಗಾಗಿ ಪೂರ್ಣ ರೂಪದಲ್ಲಿ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.