ನವದೆಹಲಿ: ಉಪರಾಷ್ಟ್ರಪತಿ ಚುನಾವಣೆ ಮತ್ತು ಫಲಿತಾಂಶದ ದಿನಾಂಕವನ್ನು ಚುನಾವಣಾ ಆಯೋಗ ಗುರುವಾರ ಘೋಷಣೆ ಮಾಡಿದ್ದು, ಆ.5ಕ್ಕೆ ಮತದಾನ ನಡೆಯಲಿದೆ. ಫಲಿತಾಂಶವೂ ಅದೇ ದಿನ ಹೊರಬೀಳಲಿದೆ.
‘ನಾಮಪತ್ರ ಸಲ್ಲಿಕೆಗೆ ಜುಲೈ 18 ಕೊನೆ ದಿನಾಂಕವಾಗಿದೆ, ಚುನಾವಣೆ ಮತ್ತು ಮತಯೆಣಿಕೆ ಆ.5ರಂದು ನಡೆಯಲಿದೆ’ ಎಂದು ಚುನಾವಣಾ ಆಯೋಗದ ಅಧ್ಯಕ್ಷ ನಸೀಮ್ ಜೈದ್ ಘೋಷಿಸಿದ್ದಾರೆ.
ರಾಜ್ಯಸಭೆಯ ಸೆಕ್ರೆಟರಿ ಜನರಲ್ ಶಂಶೀರ್ ಶರೀಫ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಯ ರಿಟರ್ನಿಂಗ್ ಆಫೀಸರ್ ಆಗಿ ನೇಮಕ ಮಾಡಲಾಗಿದೆ.
ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಅಧಿಕಾರವಧಿ ಆ.10ಕ್ಕೆ ಕೊನೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.