ನವದೆಹಲಿ: ನರೇಂದ್ರ ಮೋದಿ ಸರ್ಕಾರ ವ್ಯವಸ್ಥೆಯನ್ನು ಬದಲಾಯಿಸಲು ಬದ್ಧವಾಗಿದ್ದು, ಒಂದು ವರ್ಷದ ಅವಧಿಯಲ್ಲಿ ಒಂದೇ ಒಂದು ಭ್ರಷ್ಟಾಚಾರದ ಹಗರಣವೂ ನಡೆದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.
ಸರ್ಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು ‘ಈ ಒಂದು ವರ್ಷದಲ್ಲಿ ಬಹಳಷ್ಟು ಬದಲಾವಣೆಯಾಗಿದೆ, ಇದಕ್ಕೂ ಮುಂಚಿನ ವರ್ಷದಲ್ಲಿ ಇಡೀ ದೇಶವೇ ಭ್ರಷ್ಟಾಚಾರದಿಂದ ಮುಳುಗಿ ಹೋಗಿತ್ತು, ಕೃಷಿ, ಕೈಗಾರಿಕೆ, ಉದ್ಯೋಗದಲ್ಲಿ ಯಾವುದೇ ಬದಲಾವಣೆ ಇರಲಿಲ್ಲ, ಎಲ್ಲವೂ ಋಣಾತ್ಮಕವಾಗಿತ್ತು. ಈಗ ಎಲ್ಲವೂ ಧನಾತ್ಮಕವಾಗಿದೆ. ನಮ್ಮ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪವಿಲ್ಲ’ ಎಂದಿದ್ದಾರೆ.
ಭೂಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದ ಅವರು, ವಿರೋಧ ಪಕ್ಷಗಳು ಅಭಿವೃದ್ಧಿಯ ವಿಷಯವನ್ನು ರಾಜಕೀಯ ಮಾಡುತ್ತಿವೆ. ರಾಜ್ಯಸಭೆಯಲ್ಲಿ ಬಹುಮತವಿಲ್ಲದ ಕಾರಣ ಮಸೂದೆ ಅಂಗೀಕಾರ ಸಾಧ್ಯವಾಗಿಲ್ಲ. ಆದರೆ ಮಸೂದೆ ಜಾರಿಗೆ ನಾವು ಬದ್ಧರಾಗಿದ್ದೇವೆ ಎಂದರು.
ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಪ್ರತಿಪಕ್ಷಗಳಿಗೆ ಸಮಾನ ಪಾತ್ರವಿದೆ, ಅವುಗಳು ಭೂಮಸೂದೆಗೆ ಬೆಂಬಲ ನೀಡಬೇಕಿತ್ತು ಆದರೆ ಹಾಗೆ ಮಾಡಿಲ್ಲ, ರಾಜಕೀಯ ಮಾಡಲು ಹಲವು ಸ್ಥಳಗಳಿವೆ, ಆದರೆ ಅಭಿವೃದ್ಧಿಯಲ್ಲಿ ರಾಜಕೀಯ ಮಾಡಬಾರದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.