ನವದೆಹಲಿ : ಉಪ ರಾಷ್ಟ್ರಪತಿ ಚುನಾವಣೆಯು ಆಗಸ್ಟ್ 5 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಜುಲೈ 17 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಗಸ್ಟ್ 5 ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಅಂದೇ ಫಲಿತಾಂಶವೂ ಹೊರಬೀಳಲಿದೆ.
ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿಯವರ ಅಧಿಕಾರಾವಧಿ ಆಗಸ್ಟ್ 10ರಂದು ಅಂತ್ಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲಾಗುತ್ತಿದೆ.
ಇಂದಿನಿಂದ ನಾಮಪತ್ರ ಸಲ್ಲಿಸಬಹುದಾಗಿದೆ ಹಾಗೂ ಜುಲೈ 18 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ವಿವಿಧ ರಾಜ್ಯಗಳ ಶಾಸಕರು ಹಾಗೂ ಸಂಸತ್ ಸದಸ್ಯರು ಸೇರಿದಂತೆ 790 ಜನ ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ.
ಉಪ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಥವಾ ಪ್ರತಿಪಕ್ಷ ಇನ್ನೂ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.