ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕನಿಷ್ಠ ಸರ್ಕಾರ ಮಂತ್ರ ನಗರ ವಲಯದಲ್ಲಿ ಆರಂಭಗೊಂಡಿದ್ದು, ಎರಡು ಕೇಂದ್ರ ಸಚಿವಾಲಯಗಳನ್ನು ವಿಲೀನಗೊಳಿಸಲು ಮುಂದಾಗಿದೆ.
ನಗರ ಪ್ರದೇಶಗಳಿಗೆ ನಿಯಮ ರೂಪಿಸುತ್ತಿರುವ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನಾ ಸಚಿವಾಲಯಗಳನ್ನು ವಿಲೀನಗೊಳಿಸಲು ಕೇಂದ್ರ ನಿರ್ಧರಿಸಿದೆ.
ನಗರಾಭಿವೃದ್ಧಿ ಸಚಿವಾಲಯವು ನಗರಗಳನ್ನು ವಾಸಯೋಗ್ಯ ಮಾಡುತ್ತದೆ, ನಗರ ಬಡತನ ನಿರ್ಮೂಲನಾ ಸಚಿವಾಲಯ ನಗರಗಳ ಬಡವರ ಸಾಮಾಜಿ-ಆರ್ಥಿಕ ಸ್ಥಿತಿಗತಿಗಳನ್ನು ಸುಧಾರಿಸಲು ಕ್ರಮಗಳನ್ನು ಕೈಗೊಳ್ಳುತ್ತದೆ.
ಈ ಎರಡೂ ಸಚಿವಾಲಯಗಳನ್ನು ವಿಲೀನಗೊಳಿಸುವ ಪ್ರಸ್ತಾವಣೆಯನ್ನು ಸಂಪುಟಕ್ಕೆ ಕಳುಹಿಸಲಾಗಿದೆ. 2014ರಲ್ಲಿ ಎನ್ಡಿಎ ಸರ್ಕಾರ ಆಡಳಿತಕ್ಕೆ ಬಂದ ಬಳಿಕದ ಮೊದಲ ಸಚಿವಾಲಯ ವಿಲೀನ ಕಾರ್ಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.