ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಜನತೆ ಪೊಲೀಸ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಶ್ವಾಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಅಮಾನುಷ ಕೃತ್ಯ ನಡೆಸುತ್ತಿರುವ ಮತಾಂಧ ಶಕ್ತಿಗಳು ಮತ್ತು ದುಷ್ಕರ್ಮಿಗಳಿಗೆ ಪ್ರಚೋದನೆ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರ್ಣಾಯಕ ಹೋರಾಟ ನಡೆಸುವುದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳಿಗೆ ಅನಿವಾರ್ಯವಾಗಲಿದೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬಿ.ಸಿ.ರೋಡ್ನಲ್ಲಿ ಸೆಕ್ಷನ್ ಇದ್ದರೂ ಹಿಂದೂಗಳಿಗೆ ಆದ ಅನ್ಯಾಯದ ವಿರುದ್ಧ ಆಕ್ರೋಶಿತ ಜನರ ಶಕ್ತಿ ಪ್ರದರ್ಶನವಾಗಿದೆ. ಇದರಲ್ಲಿ ಭಾಗವಹಿಸಿದವರ ವಿರುದ್ಧ ಪ್ರಕರಣ ದಾಖಲಿಸುವ ಪೊಲೀಸರಿಗೆ ಆರ್ಎಸ್ಎಸ್ ಕಾರ್ಯಕರ್ತ ಶರತ್ ಹಂತಕರನ್ನು ಪತ್ತೆ ಹಚ್ಚಲು ಇದುವರೆಗೆ ಸಾಧ್ಯವಾಗಿಲ್ಲ. ಶರತ್ ಅಂತಿಮ ಯಾತ್ರೆಗೂ ಕಲ್ಲು ತೂರಾಟ ನಡೆಸುವ ಹೀನ ಕೃತ್ಯ ನಡೆದಿದೆ. ಶನಿವಾರ ರಾತ್ರಿ
ಕುತ್ತಾರುವಿನಲ್ಲಿ ಚಿರಂಜೀವಿ ಎನ್ನುವ ಯುವಕನ ಮೇಲೆ ತಲವಾರು ಹಲ್ಲೆ ನಡೆದಿದೆ. ಹಿಂದೂಗಳ ಸಹನೆಗೂ ಮಿತಿ ಇದೆ. ತಕ್ಷಣ ಆರೋಪಿ ಗಳನ್ನು ಬಂಧಿಸಿ ಮತ್ತು ಶರತ್ ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸಂಸದರು ಒತ್ತಾಯಿಸಿದ್ದಾರೆ.
ಎನ್ಐಎ ತನಿಖೆಗೆ ಕೋರಿಕೆ :
ಕರಾವಳಿಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ವಿನಂತಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾನುಷ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಜಿಲ್ಲೆಗೆ ಆಗಮಿಸಿ ಕಾಂಗ್ರೆಸ್ ಸಮಾವೇಶ ನಡೆಸುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಇಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸುವ ಕನಿಷ್ಠ ಜ್ಞಾನವೂ ಇರಲಿಲ್ಲ. ಕೆಪಿಸಿಸಿ ಅಧ್ಯಕ್ಷರು, ಕಾಂಗ್ರೆಸ್ ಸಚಿವರು ಬಿಜೆಪಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದೇ ಅಶಾಂತಿ ಮುಂದುವರಿಯಲು ಕಾರಣವಾಗಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.