ನವದೆಹಲಿ: ಎಂಜಿನಿಯರಿಂಗ್ ಕಾಲೇಜು ಅಥವಾ ತಾಂತ್ರಿಕ ಸಂಸ್ಥೆಗಳ ವಿದ್ಯಾರ್ಥಿಗಳು ಪದವಿಯನ್ನು ಪಡೆಯಬೇಕಾದರೆ ಯೋಗ, ಕ್ರೀಡೆ ಅಥವಾ ಇತರ ಸಾಮಾಜಿಕ ಚಟುವಟಿಕೆಯಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.
ಈ ಹಿಂದೆಯೂ ಎನ್ಎಸ್ಎಸ್, ಎನ್ಸಿಸಿ, ಉನ್ನತ್ ಭಾರತ್ ಅಭಿಯಾನ್ನಂತಹ ಚಟುವಟಿಕೆಗಳನ್ನು ವಿದ್ಯಾ ಸಂಸ್ಥೆಗಳು ಹೊಂದಿದ್ದವು, ಆದರೆ ಪದವಿ ಪಡೆಯಲು ಇವುಗಳು ಕಡ್ಡಾಯವಾಗಿರಲಿಲ್ಲ.
ಇದೀಗ ಸುಮಾರು 18 ಲಕ್ಷ ವಿದ್ಯಾರ್ಥಿಗಳುಳ್ಳ 10 ಸಾವಿರ ಸಂಸ್ಥೆಗಳ ಆಡಳಿತ ಹೊಂಡಿರುವ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್(ಎಐಸಿಟಿಇ) ಈ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಕಡ್ಡಾಯಗೊಳಿಸಿದೆ.
ಯೋಗ, ಕ್ರೀಡೆ ಅಥವಾ ಇತ ಚಟುವಟಿಕೆಗಳಲ್ಲಿ ಶೇ.25ರಷ್ಟು ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪದವಿ ಪಡೆಯಲು ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.