ನವದೆಹಲಿ: ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರೊಂದಿಗೆ ಭಿನ್ನಾಭಿಪ್ರಾಯ ಮೂಡಿಸಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ರಾಷ್ಟ್ರಪತಿಗಳನ್ನು ಭೇಟಿಯಾಗಿ ಈ ಸಂಬಂಧ ಮಾತುಕತೆ ನಡೆಸಲಿದ್ದಾರೆ.
ಇಂದು ಸಂಜೆ 6 ಗಂಟೆಗೆ ಅವರು ರಾಷ್ಟ್ರಪತಿಗಳನ್ನು ಭೇಟಿಯಾಗಲಿದ್ದಾರೆ.
ಅಷ್ಟೇ ಅಲ್ಲದೇ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವಂತೆ ಕೋರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯ ಹಂಗಾಮಿ ಮುಖ್ಯಕಾರ್ಯದರ್ಶಿಯಾಗಿ ಶಕುಂತಲಾ ಗ್ಲಾಮಿಂಗ್ ಅವರನ್ನು ಜಂಗ್ ಅವರು ನೇಮಿಸಲು ಆದೇಶಿಸಿದ್ದು ಕೇಜ್ರಿವಾಲ್ ಅವರ ಕೆಂಗಣ್ಣಿಗೆ ಕಾರಣವಾಗಿದೆ. ಇದೇ ಕಾರಣಕ್ಕೆ ಪ್ರಧಾನ ಕಾರ್ಯದರ್ಶಿ ಅನಿಂದ್ ಮಜೂಂದಾರ್ ಅವರ ಕಛೇರಿಗೂ ನಿನ್ನೆ ಬೀಗ ಜಡಿಯಲಾಗಿತ್ತು.
ಒಟ್ಟಿನಲ್ಲಿ ಲೆ.ಗವರ್ನರ್ ಮತ್ತು ಕೇಜ್ರಿವಾಲ್ ನಡುವೆ ಉದ್ಭವಿಸಿರುವ ಬಿಕ್ಕಟ್ಟು ರಾಷ್ಟ್ರಪತಿಗಳ ಭೇಟಿಯ ಬಳಿಕವಾದರೂ ಶಮನವಾಗಲಿದೆಯೇ ಎಂದು ಕಾದು ನೋಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.