ನವದೆಹಲಿ: ಗೋವಿನ ಪಂಚಗವ್ಯಗಳ ಪ್ರಯೋಜನಗಳ ಬಗ್ಗೆ ವೈಜ್ಞಾನಿಕ ಸಂಶೋಧನೆಗಳನ್ನು ನಡೆಸುವ ಸಲುವಾಗಿ ಕೇಂದ್ರ 19 ಸದಸ್ಯರುಳ್ಳ ಸಮಿತಿಯೊಂದನ್ನು ರಚಿಸಿದೆ.
ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಇದು ಪಂಚಗವ್ಯಗಳಾದ ಗೋ ಮೂತ್ರ, ಸಗಣಿ, ಹಾಲು, ಮೊಸರು ಮತ್ತು ತುಪ್ಪಗಳಿಂದಾಗುವ ಪ್ರಯೋಜನಗಳ ಬಗ್ಗೆ ವೈಜ್ಞಾನಿಕ ಸಂಶೋಧನೆಗಳನ್ನು ನಡೆಸಲಿದೆ.
ಪಂಚಗವ್ಯದಿಂದ ಸಿಗುವ ಪೌಷ್ಠಿಕತೆ, ಆರೋಗ್ಯ, ಕೃಷಿಗಾಗುವ ಲಾಭಗಳನ್ನು ವೈಜ್ಞಾನಿಕವಾಗಿ ಈ ಸಮಿತಿ ಸಂಶೋಧನೆಗಳೊಪಡಿಸಲಿದೆ.
ನ್ಯಾಷನಲ್ ಸ್ಟೀರಿಮಗ್ ಕಮಿಟಿ ಎಂದು ಇದನ್ನು ಕರೆಯಲಾಗಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಬಯೊಟೆಕ್ನಾಲಜಿ ಇಲಾಖೆ, ಹೊಸ ಮತ್ತು ನವೀಕರಿಸಬಹುದಾದ ಇಂಧನಗಳ ಸಚಿವಾಲಯಗಳ ಕಾರ್ಯದರ್ಶಿಗಳು ಮತ್ತು ಐಐಟಿಯ ವಿಜ್ಞಾನಿಗಳು ಈ ಸಮಿತಿಯಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.