ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಸುದ್ದಿ ಮಾಡಿದ್ದ ಡಿಐಜಿ ಡಿ.ರೂಪಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇವರೊಂದಿಗೆ ಡಿಜಿಪಿ ಎಂ.ಎನ್ ರೆಡ್ಡಿ, ಡಿಜಿಪಿ ಸತ್ಯನಾರಾಯಣ್ ರಾವ್ ಸೇರಿದಂತೆ ಒಟ್ಟು ಐದು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಕಾರಾಗೃಹ ಇಲಾಖೆ ಡಿಐಜಿಯಾಗಿದ್ದ ರೂಪಾ ಅವರನ್ನು ಇದೀಗ ರಾಜ್ಯ ರಸ್ತೆ ಸುರಕ್ಷತೆ ಮತ್ತು ಸಂಚಾರ ಆಯುಕ್ತರನ್ನಾಗಿ ನೇಮಕ ಮಾಡಲು ಆದೇಶ ಹೊರಡಿಸಲಾಗಿದೆ. ರಸ್ತೆ ಸುರಕ್ಷತೆ ಮತ್ತು ಸಂಚಾರ ಆಯುಕ್ತರಾಗಿದ್ದ ಡಾ.ಎ.ಎಸ್.ಎನ್ ಮೂರ್ತಿ ಅವರನ್ನು ಅರಣ್ಯ ಘಟಕದ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.
ಕಾರಾಗೃಹ ಇಲಾಖೆ ಡಿಐಜಿ ಸತ್ಯನಾರಾಯಣ್ ಸ್ಥಾನಕ್ಕೆ ಎಸಿಬಿಯ ಎಡಿಜಿಪಿ ಮೇಘರಿಕ್ ಅವರನ್ನು ತರಲಾಗಿದೆ.
ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಬಹಿರಂಗಗೊಳಿಸಿದ ರೂಪಾ ಅವರನ್ನು ವರ್ಗಾವಣೆ ಮಾಡಿದ ಸರ್ಕಾರದ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ. ಆದರೆ ಇದು ಆಡಳಿತದ ಪ್ರಕ್ರಿಯೆ. ಈ ಬಗ್ಗೆ ಎಲ್ಲಾ ಮಾಧ್ಯಮಗಳಿಗೆ ನೀಡಬೇಕಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.