ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕನಸಿನ ಯೋಜನೆಯಾದ ಬುಲೆಟ್ ಟ್ರೈನ್ ಯೋಜನೆ ವೇಗ ಪಡೆದುಕೊಳ್ಳುತ್ತಿದೆ. ಹಲವಾರು ಬುಲೆಟ್ ಟ್ರೈನ್ ಯೋಜನೆಗಳ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸುತ್ತಿರುವ ಹೈ ಸ್ಪೀಡ್ ರೈಲ್ವೇ ಕಾರ್ಪೋರೇಶನ್(ಎಚ್ಎಸ್ಆರ್ಸಿ) ದೆಹಲಿ-ಅಮೃತಸರ ಯೋಜನೆಯ ಕಾರ್ಯಸಾಧ್ಯತೆಯ ಅಂತಿಮ ವರದಿ ನೀಡಿದೆ.
ಅಲ್ಲದೇ ದೆಹಲಿ-ಕೋಲ್ಕತ್ತಾ ಕಾರಿಡಾರ್ ಬಗ್ಗೆ ಕರಡು ವರದಿಯನ್ನು ರೈಲ್ವೇ ಸಚಿವಾಲಯಕ್ಕೆ ಸಲ್ಲಿಕೆ ಮಾಡಿದೆ.
ಎಚ್ಎಸ್ಆರ್ಸಿಯು ವಿವಿಧ ದೇಶಗಳ ಹಲವಾರು ಕನ್ಸಲ್ಟೆಂಟನ್ಸ್ಗಳೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ಈ ವರ್ಷದ ಅಂತ್ಯಕ್ಕೆ ಇದು ಎಲ್ಲಾ ಯೋಜನೆಗಳ ಕಾರ್ಯಸಾಧ್ಯತೆಯ ಅಂತಿಮ ವರದಿಯನ್ನು ಸಲ್ಲಿಕೆ ಮಾಡುವ ಸಾಧ್ಯತೆ ಇದೆ.
ಈಗಾಗಲೇ ರೈಲ್ವೇಯು ಮುಂಬಯಿ-ಅಹ್ಮದಾಬಾದ್ ಬುಲೆಟ್ ಟ್ರೈನ್ ಪ್ರಾಜೆಕ್ಟ್ಗಾಗಿ ಈಗಾಗಲೇ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಕಂಪನಿಯನ್ನು ಸ್ಥಾಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.